ಶಾಲಾ-ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರಿಂದ 21.14 ಲಕ್ಷ ದಂಡ ವಸೂಲಿ

ಈ ಸುದ್ದಿಯನ್ನು ಶೇರ್ ಮಾಡಿ

Smoking--01

ಬೆಂಗಳೂರು, ಜೂ.21- ಬೆಂಗಳೂರು ನಗರದಾದ್ಯಂತ ಶಾಲಾ-ಕಾಲೇಜುಗಳ ಅಕ್ಕಪಕ್ಕ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟದ ಅಂಗಡಿ ಇಟ್ಟುಕೊಂಡು ಅಪ್ರಾಪ್ತ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇವನೆ ಮಾಡುತ್ತಿದ್ದವರ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.  ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೋಟ್ಪಾ ಕಾಯ್ದೆಯಡಿ 2016ನೆ ಸಾಲಿನಲ್ಲಿ ಒಟ್ಟು 12226 ಪ್ರಕರಣಗಳನ್ನು ದಾಖಲಿಸಿ 22,64,410 ಲಕ್ಷ ರೂ. ದಂಡವನ್ನು ವಸೂಲಿ ಮಾಡಲಾಗಿರುತ್ತದೆ. ಅದೇ ರೀತಿ 2017ನೆ ಸಾಲಿನಲ್ಲಿ (ಮೇ ಮಾಹೆಯ ಅಂತ್ಯಕ್ಕೆ) ಒಟ್ಟು 12594 ಪ್ರಕರಣಗಳನ್ನು ದಾಖಲಿಸಿ ಒಟ್ಟು 21,14, 820 ರೂ. ದಂಡವನ್ನು ವಸೂಲಿ ಮಾಡಲಾಗಿರುತ್ತದೆ.

ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಶಾಲಾ-ಕಾಲೇಜುಗಳ ಅಕ್ಕಪಕ್ಕ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ 2017ನೆ ಸಾಲಿನಲ್ಲಿ ಕೋಟ್ಪಾ ಕಾಯ್ದೆಯಡಿ ಒಟ್ಟು 145 ಅಂಗಡಿಗಳನ್ನು ಪರಿಶೀಲನೆ ಮಾಡಿ 24 ಎಫ್‍ಐಆರ್‍ಗಳನ್ನು ದಾಖಲು ಮಾಡಿ ಒಟ್ಟು 25 ಜನರನ್ನು ಬಂಧಿಸಲಾಗಿರುತ್ತದೆ.  ದಾಳಿ ವೇಳೆ ಒಟ್ಟು ರೂ.3,86,219 ಮೌಲ್ಯದ ತಂಬಾಕು ಉತ್ಪನ್ನಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಹಾಗೂ 103 ಪ್ರಕರಣಗಳಲ್ಲಿ ದಂಡವನ್ನು ವಸೂಲಿ ಮಾಡಲಾಗಿರುತ್ತದೆ.

ಜೂ.19ರಂದು ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಶಾಲಾ-ಕಾಲೇಜುಗಳ ಹತ್ತಿರ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಒಟ್ಟು 29 ಅಂಗಡಿಗಳನ್ನು ಪರಿಶೀಲನೆ ಮಾಡಿ 47 ಪ್ರಕರಣಗಳಲ್ಲಿ ದಂಡವನ್ನು ವಸೂಲಿ ಮಾಡಿರುತ್ತಾರೆ.  3 ಎಫ್‍ಐಆರ್‍ಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿ 6,280 ರೂ. ಮೌಲ್ಯದ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿರುತ್ತಾರೆ.  ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ನಡೆಸಿರುತ್ತಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin