ಇತಿಹಾಸ ಪ್ರಸಿದ್ದ ಹಂಪಿಯಲ್ಲಿನ ಅಕ್ರಮ ಕಟ್ಟಡಗಳ ನೆಲಸಮಕ್ಕೆ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Hampi--01

ಬಳ್ಳಾರಿ, ಜೂ.22- ಇತಿಹಾಸ ಪ್ರಸಿದ್ದ ಹಂಪಿಯಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿರುವ 146 ಮಂದಿ ಮಾಲೀಕರಿಗೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ನೋಟಿಸ್ ನೀಡಿ ಇನ್ನು 15 ದಿನದೊಳಗೆ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದೆ. ಈ ಹಿಂದೆ ಹೈಕೋರ್ಟ್ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ಪ್ರಾಧಿಕಾರಕ್ಕೆ ಸೂಚಿಸಿತ್ತು. ಅದರಂತೆ ಪ್ರಾಧಿಕಾರವು ಮಾಲೀಕರಿಗೆ ಆದೇಶಿಸಿತ್ತು. ಆದರೆ ಮಾಲೀಕರು ತೆರವುಗೊಳಿಸದ ಹಿನ್ನೆಲೆಯಲ್ಲಿ ಈಗ ಮತ್ತೆ ಹೈಕೋರ್ಟ್ ಪ್ರಾಧಿಕಾರಕ್ಕೆ ನೋಟಿಸ್ ನೀಡಿದೆ.

ಈ ಹಿನ್ನೆಲೆಯಲ್ಲಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ 14 ಗ್ರಾಮಗಳು ಹಾಗೂ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ 15 ಗ್ರಾಮಗಳಿಗೆ ಸೇರಿದ ಪ್ರದೇಶಗಳಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿಕೊಂಡಿರುವ 146 ಜನರಿಗೆ ಇಂದು ನೋಟಿಸ್ ನೀಡಿದೆ.  ನೋಟಿಸ್ ಹಿನ್ನೆಲೆಯಲ್ಲಿ ಮಾಲೀಕರು ಯಾವುದೇ ಸಬೂಬು ಹೇಳದೆ ತಕ್ಷಣ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಪ್ರಾಧಿಕಾರ ಖಡಕ್ ಸೂಚನೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin