ಕೌಟುಂಬಿಕ ಕಲಹ, ಪತಿಯನ್ನೇ ಇರಿದು ಕೊಂದ ಪತ್ನಿ

ಈ ಸುದ್ದಿಯನ್ನು ಶೇರ್ ಮಾಡಿ

Murder-01

ಬಳ್ಳಾರಿ, ಜೂ.22- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಸೂಗೂರಿನ ನಿವಾಸಿ ನಾಗಪ್ಪ ಕೊಲೆಯಾದ ಪತಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರತಿ ದಿನ ಇಬ್ಬರ ನಡುವೆ ಜಗಳ ನಡೆಯುತ್ತಿದ್ದು, ಇಂದು ಅತಿರೇಕಕ್ಕೆ ತಿರುಗಿದ್ದು , ಇದರಿಂದ ಬೇಸತ್ತ ಪತ್ನಿ ಅನಿತಾ , ನಾಗಪ್ಪನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾಳೆ. ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin