ಡಾರ್ಜಲಿಂಗ್‍ನಲ್ಲಿ ಕನ್ನಡಿಗ ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

Gangadhar-01

ಬೆಂಗಳೂರು, ಜೂ.22- ಗಡಿಭದ್ರತಾ ಪಡೆ(ಬಿಎಸ್‍ಎಫ್)ಯಲ್ಲಿ ಯೋಧನನಾಗಿ ಸೇವೆ ಸಲ್ಲಿಸುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದ ಗಂಗಾಧರ್ ಎಂಬುವರು ಡಾರ್ಜಲಿಂಗ್‍ನಲ್ಲಿ ಹುತಾತ್ಮರಾಗಿದ್ದಾರೆ. ನಿನ್ನೆ ಪಶ್ಚಿಮ ಬಂಗಾಳದ ಡಾರ್ಜಲಿಂಗ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಂಡಿನ ದಾಳಿಗೆ ಗಂಗಾಧರ್ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ವೀರಯೋಧನ ಶವ ಪತ್ತೆಯಾಗಿದ್ದು , ಬಳಿಕ ಹಿರಿಯ ಸೇನಾಧಿಕಾರಿಗಳು ಅವರ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಗಂಗಾಧರ್ ಬಿಎಸ್‍ಎಫ್‍ನಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. ಕೋಲ್ಕತ್ತ ವಿಮಾನ ನಿಲ್ದಾಣದಿಂದ ಇಂದು ಸಂಜೆ ವೀರಯೋಧನ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆ ಇದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. ಯೋಧನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು , ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin