ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಸ್ಥಗಿತ, ಮಕ್ಕಳೂ ಸೇರಿ 11 ರೋಗಿಗಳ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

Oxygen

ಇಂದೋರ್, ಜೂ.23-ಮಧ್ಯಪ್ರದೇಶದ ಇಂದೋರ್‍ನ ಮೈ ಹಾಸ್ಪಿಟಲ್ ಸರ್ಕಾರಿ ಆಸ್ಪತ್ರೆಯಲ್ಲಿ 15 ನಿಮಿಷಗಳ ಕಾಲ ಆಮ್ಲಜನಕ ಪೂರೈಕೆ ಸ್ಥಗಿತಗೊಂಡು ಇಬ್ಬರು ಮಕ್ಕಳೂ ಸೇರಿದಂತೆ 11 ರೋಗಿಗಳು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ನಿಗೂಢ ಎಂಬಂತೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು ಎಂದು ಹೇಳಲಾಗಿದೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಇಷ್ಟು ದೊಡ್ಡ ಆಸ್ಪತ್ರೆಯಲ್ಲಿ ಸಾವು-ನೋವುಗಳು ಸಾಮಾನ್ಯ ಎಂದು ಹೇಳಿಕೆ ನೀಡಿದೆ.

ಆಮ್ಲಜನಕ ಪೂರೈಕೆ ವ್ಯತ್ಯಯ ಅಥವಾ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ವಿಭಾಗೀಯ ಆಯುಕ್ತ ಸಂಜಯ್ ದುಬೆ ಈ ಕುರಿತು ತನಿಖೆ ನಡೆಸುವುದಾಗಿ ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin