ಖತರ್ನಾಕ್ ಮನೆಗಳ್ಳರ ಬಂಧನ, 22 ಲಕ್ಷ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

Chamaraj--01

ಬೆಂಗಳೂರು, ಜೂ.24- ಕಾಮಾಕ್ಷಿಪಾಳ್ಯ ಪೊಲೀಸರು ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ 22 ಲಕ್ಷ ರೂ. ಮೌಲ್ಯದ 730 ಗ್ರಾಂ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ ಒಟ್ಟು 17 ಪ್ರಕರಣಗಳು ಪತ್ತೆಯಾಗಿವೆ. ರಾಜಗೋಪಾಲನಗರದ ಶಿವಕುಮಾರ್ ಅಲಿಯಾಸ್ ಶಿವ ಅಲಿಯಾಸ್ ಕಾಗೆ ಶಿವ(29), ನಂದಿನಿ ಬಡಾವಣೆಯ ಅರುಣ್ ಎ.ಎನ್(29) ಹಾಗೂ ಪೀಣ್ಯ 1ನೇ ಹಂತದ ಅರುಣ್ ಅಲಿಯಾಸ್ ಆರ್‍ಎಂಸಿ ಬಂಧಿತ ಆರೋಪಿಗಳು.

ನಗರದ ಸುಂಕದಕಟ್ಟೆಯ ಕೆಬ್ಬೆಹಳ್ಳ, ಮದ್ದೂರಮ್ಮ ಬಡಾವಣೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಮನೆಗಳ ಬಾಗಿಲ ಬೀಗ ಮುರಿದು ಚಿನ್ನಬೆಳ್ಳಿ ಆಭರಣಗಳನ್ನು ದೋಚಿರುವ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿತ್ತು.   ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ 22 ಲಕ್ಷ ರೂ.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 9 ಪ್ರಕರಣಗಳು, ಮಾಗಡಿರಸ್ತೆ ಠಾಣೆ ಮತ್ತು ಚಂದ್ರಲೇಔಟ್ ಠಾಣೆ ತಲಾ ಮೂರು ಹಾಗೂ ಆರ್‍ಆರ್‍ನಗರ ಠಾಣೆ ಮತ್ತು ಅನ್ನಪೂರ್ಣೇಶ್ವರಿ ನಗರ ಠಾಣೆಯ ತಲಾ ಒಂದೊಂದು ಮನೆಗಳ್ಳವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ನೇತೃತ್ವದಲ್ಲಿ ವಿಜಯನಗರ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ಎಂ.ಆರ್.ಸತೀಶ್ ಮಾರ್ಗದರ್ಶನದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ವಿ.ಕಿರಣ್‍ಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin