ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

2-Arrested--01

ಬೆಂಗಳೂರು, ಜೂ.24- ಮಾದಕ ವಸ್ತು ಕೊಕೈನ್‍ಅನ್ನು ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ನೈಜೀರಿಯಾ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 1.50 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.  ಮೀಚಿಯೆಲ್ ಚುವುಬುಕ (30), ಜೇಮ್ಸ್ ಅಡೆಕುನೆಲ್ (27) ಬಂಧಿತ ನೈಜೀರಿಯಾ ಪ್ರಜೆಗಳಾಗಿದ್ದು, ಇವರಿಂದ 5.35 ಗ್ರಾಂ ತೂಕದ ಕೊಕೈನ್, ಕೃತ್ಯಕ್ಕೆ ಬಳಸುತ್ತಿದ್ದ 6 ಮೊಬೈಲ್, 1 ಬೈಕ್, 2 ಲ್ಯಾಪ್‍ಟಾಪ್ ಹಾಗೂ ಹಣವನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 1.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಟಿಸಿ ಪಾಳ್ಯ ಮುಖ್ಯರಸ್ತೆಯ ಆನಂದಪುರ ಸರ್ಕಲ್ ಬಳಿ ನೈಜೀರಿಯಾ ಪ್ರಜೆಗಳಿಬ್ಬರು ಮಾದಕ ವಸ್ತು ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin