ಮಸೀದಿಯಲ್ಲಿ ಮಾಂಸ, ಮದ್ಯದ ಬಾಟಲಿಗಳು ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

Meet--01

ಅಮೇಥಿ, ಜೂ.26-ರಂಜಾನ್ ಹಬ್ಬದ ದಿನದಂದೇ ಉತ್ತರಪ್ರದೇಶದ ಅಮೇಥಿ ಜಿಲ್ಲೆಯ ಶುಕುಲ್ ಬಜಾರ್ ವ್ಯಾಪ್ತಿಯ ಮಸೀದಿಯೊಂದರಲ್ಲಿ ಮಾಂಸ, ಮದ್ಯದ ಬಾಟಲಿಗಳು ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಶುಕುಲ್ ಬಜಾರ್‍ನ ಬದಲ್‍ಗರ್ ಈದ್ಗಾ ಮಸೀದಿಯಲ್ಲಿ ಮಾಂಸ, ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಕೆಲವು ದುಷ್ಕರ್ಮಿಗಳು ರಂಜಾನ್ ದಿನದಂದೇ ಕೋಮುಗಲಭೆ ಸೃಷ್ಟಿ ಮಾಡಲು ಈ ಕೃತ್ಯ ಮಾಡಿರಬಹುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೂನಂ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮುಸ್ಲಿಂ ಬಾಂಧವರು ಯಾವುದೇ ಆಂತಕ ಇಲ್ಲದೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಕೃತ್ಯ ಎಸಗಿರುವವರ ಪತ್ತೆಗಾಗಿ ತನಿಖೆ ನಡೆಯುತ್ತಿದ್ದು, ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೂನಂ ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin