ಆಧಾರ್ ಕಡ್ಡಾಯ ತಡೆಗೆ ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

adhar

ನವದೆಹಲಿ, ಜೂ. 27-ವಿವಿಧ ಸಮಾಜ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್‍ನನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ಅಧಿಸೂಚನೆ ವಿರುದ್ಧ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ನವೀನ್ ಸಿನ್ಹಾ ಅವರನ್ನು ಒಳಗೊಂಡ ರಜೆ ಕಾಲದ ಪೀಠವು ಈ ಸಂಬಂಧ ಮಧ್ಯಂತರ ಆದೇಶಕ್ಕೆ ನಿರಾಕರಿಸಿದ್ದಾರೆ.

ಆಧಾರ್ ಕಾರ್ಡ್ ಕೊರತೆಯಿಂದಾಗಿ ಸರ್ಕಾರವು ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಫಲಾನುಭವಗಳಿಂದ ಜನರು ವಂಚಿಸಬಹುದೆಂಬ ಅರ್ಜಿದಾರರ ಆತಂಕದ ಮೇರೆಗೆ ಈ ಹಂತದಲ್ಲಿ ಅಧಿಸೂಚನೆ ವಿರುದ್ಧ ಆದೇಶ ನೀಡಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin