ಬ್ಯಾಂಕ್ನಲ್ಲೇ ಸೆಕ್ಯೂರಿಟಿ ಗಾರ್ಡ್ ನೇಣಿಗೆ ಶರಣು
ಮಧುಗಿರಿ, ಜೂ.27- ಬ್ಯಾಂಕ್ನಲ್ಲೇ ಸೆಕ್ಯೂರಿಟಿ ಗಾರ್ಡ್ವೊಬ್ಬರು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಪಟ್ಟಣದ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ. ವೆಂಕಟೇಶಯ್ಯ (48) ಮೃತಪಟ್ಟ ಸೆಕ್ಯೂರಿಟಿ ಗಾರ್ಡ್. ಈತ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಬ್ಯಾಂಕ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದು, ಮಧುಗಿರಿಯ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಬ್ಯಾಂಕ್ನ ಸಿಬ್ಬಂದಿಗಳು ಬ್ಯಾಂಕಿಗೆ ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಸಿಬ್ಬಂದಿಗಳು ಪಟ್ಟಣ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS