ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಿಎಸ್‍ಎಫ್ ಯೋಧ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

BSF--0

ಕೋಲಾರ,ಜೂ.28- ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಿಎಸ್‍ಎಫ್ ಯೋಧನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಜಿಎಫ್‍ನ ಬಿಎಂ ರೋಡ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಗುಮಾರನ್(43) ಮೃತಪಟ್ಟ ಬಿಎಸ್‍ಎಫ್ ಯೋಧ.ಬಿಎಸ್‍ಎಫ್‍ನ 37ನೇ ಬೆಟಾಲಿಯನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ರಜಾ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಕೊಯಮತ್ತೂರಿನ ದೇವಸ್ಥಾನ ವೊಂದಕ್ಕೆ ಹೋಗಿ ಬರುತ್ತೇನೆ ಎಂದು ಪತ್ನಿಗೆ ಹೇಳಿ ಹೋಗಿದ್ದರು.

ಬೈಕ್‍ನಲ್ಲಿ ಕೆಜಿಎಫ್‍ನ ಬಿ.ಎಂ.ರೋಡ್‍ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.   ವಿಷಯ ತಿಳಿದು ಸಬ್‍ಇನ್‍ಸ್ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗುಡಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin