ಪೊಲೀಸ್ ಆಯುಕ್ತರ ಕಚೇರಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Dharma--01

ಬೆಂಗಳೂರು, ಜೂ.28- ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ಅವರು ಇಂದು ಬೆಳಗ್ಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರಾದ ಪ್ರವೀಣ್‍ಸೂದ್ ಅವರನ್ನು ಭೇಟಿ ಮಾಡಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಠಾಣೆಗಳಲ್ಲಿ ದೂರು ನೀಡಲು  ಬರುವ ಮಹಿಳೆಯರನ್ನು ಸಿಬ್ಬಂದಿಗಳು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಅಲ್ಲದೆ ದಿನವಿಡೀ ಅವರನ್ನು ಕಾಯಿಸುವ ಕೆಲಸ ಮಾಡುತ್ತಿದ್ದಾರೆ.

ಈ ವಿಷಯವನ್ನು ಆಯುಕ್ತರ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಪೊಲೀಸ್ ಠಾಣೆಗಳಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಕಡಿಮೆ ಇದೆ. ಈ ಬಗ್ಗೆಯೂ ಆಯುಕ್ತರ ಗಮನಕ್ಕೆ ತರಲಾಗಿದೆ. ಠಾಣೆಗೆ ಬರುವ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲು ನಿಮ್ಮ ಸಿಬಂದಿಗೆ ಸೂಚನೆ ನೀಡುವಂತೆ ಆಯುಕ್ತರ ಬಳಿ ಮನವಿ ಮಾಡಿರುವುದಾಗಿ ಅವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin