ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್

ಈ ಸುದ್ದಿಯನ್ನು ಶೇರ್ ಮಾಡಿ

BMTC

ಬೆಂಗಳೂರು, ಜೂ.28- ಇಂದು ಬೆಳಗ್ಗೆ ಬಿಎಂಟಿಸಿ ಬಸ್ಸೊಂದರ ಬ್ರೇಕ್ ವಿಫಲಗೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 11 ಗಂಟೆಗೆ ಮೆಜಸ್ಟಿಕ್‍ನಿಂದ ಬೊಮ್ಮನಹಳ್ಳಿಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಹಲಸೂರು ಗೇಟ್ ಸಂಚಾರಿ ವ್ಯಾಪ್ತಿಯ ನೃಪತುಂಗ ರಸ್ತೆಗೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್‍ನಲ್ಲಿದ್ದ ಒಬ್ಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸುದ್ದಿ ತಿಳಿದ ಹಲಸೂರು ಗೇಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಬಸ್‍ನ ಬ್ರೇಕ್ ವೈಫಲ್ಯದಿಂದ ಈ ಘಟನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin