ರಾಜ್ಯಾದ್ಯಂತ 303 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪೂರಕ ಪರೀಕ್ಷೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

PUC-Result--01

ಬೆಂಗಳೂರು, ಜೂ.28- ಪ್ರಸಕ್ತ ಸಾಲಿನ ಮಾರ್ಚ್‍ನಲ್ಲಿ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ 303 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಯಿತು. ಅನುತ್ತೀರ್ಣರಾಗಿದ್ದ 3,23,364 ವಿದ್ಯಾರ್ಥಿಗಳ ಪೈಕಿ 2,51,636 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.  ಕಲಾವಿಭಾಗ 96,129, ವಿಜ್ಞಾನ ವಿಭಾಗದ 77,149 ಹಾಗೂ ವಾಣಿಜ್ಯ ವಿಭಾಗದ 78,358 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಎದುರಿಸಲಿದ್ದು, 1,47,729 ಬಾಲಕರು ಹಾಗೂ 1,03,907 ಬಾಲಕಿಯರು ಸೇರಿದಂತೆ ಕನ್ನಡ ಮಾಧ್ಯಮದ 1,24,840 ಮತ್ತು ಆಂಗ್ಲ ಮಾಧ್ಯಮದ 1,26,796 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ.

ಕೋಲಾರ:

ಜಿಲ್ಲೆಯಲ್ಲಿ ಪಿಯುಸಿ ಪೂರಕ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, 6788 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ 8 ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಾರಂಭಗೊಂಡು 3938 ಬಾಲಕರು, 2858 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದಾರೆ.  ಇದೇ ವರ್ಷದ ಮಾರ್ಚ್‍ನಲ್ಲಿ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಪೂರಕ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷಾ ಕೊಠಡಿಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಜಾಗೃತ ದಳಗಳನ್ನು ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಕೋಲಾರದಲ್ಲಿ 3, ಬಂಗಾರಪೇಟೆ 2, ಮುಳಬಾಗಿಲು, ಶ್ರೀನಿವಾಸಪುರದಲ್ಲಿ 4, ಮಾಲೂರಿನಲ್ಲಿ ತಲಾ ಒಂದೊಂದು ಕೇಂದ್ರದಲ್ಲಿ ಪೂರಕ ಪರೀಕ್ಷೆ ನಡೆಯುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin