ವಿದ್ಯಾರ್ಥಿಗಳು, ಐಟಿ-ಬಿಟಿ ನೌಕರ ರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಮಹಿಳೆಯರ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

Women-Crime

ಬೆಂಗಳೂರು, ಜೂ.28- ವಿದ್ಯಾರ್ಥಿಗಳಿಗೆ ಹಾಗೂ ಐಟಿ-ಬಿಟಿ ನೌಕರರಿಗೆ, ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಸರಸ (40) ಮತ್ತು ಸವಿತಾ (35) ಬಂಧಿತ ಮಹಿಳೆಯರಾಗಿದ್ದು, ಇವರಿಂದ 27 ಸಾವಿರ ಬೆಲೆಯ 500 ಗ್ರಾಂ ತೂಕದ ಗಾಂಜಾ, 170ರೂ. ಹಣ ವಶಪಡಿಸಿಕೊಂಡಿದ್ದಾರೆ.  ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಬಸವನಗುಡಿ ವ್ಯಾಪ್ತಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ಮಾಡಿ ಇವರನ್ನು ಬಂಧಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ ಡಾ.ಶರಣಪ್ಪ, ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಹಾಗೂ ಇನ್ಸ್‍ಪೆಕ್ಟರ್ ಶಶಿಧರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin