ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ ಸಿಎಂ ಪುತ್ರ ಡಾ.ಯತೀಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

Yathindra--01

ಮೈಸೂರು, ಜೂ.29-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಈಗಿನಿಂದಲೇ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ನಾಡ ದೇವಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಿಂಚಿನ ಸಂಚಲನ ಮೂಡಿಸಿದರು. ಗುಂಗರಾಲ್ ಛತ್ರದಲ್ಲಿ ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ವಿವಿಧೆಡೆ ತೆರಳಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸುವುದರಿಂದ ಅವರ ಪುತ್ರ ಯತೀಂದ್ರ ಚುನಾವಣೆ ಇನ್ನು 10 ತಿಂಗಳು ಇರುವಾಗಲೇ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.  ಸಾರ್ವಜನಿಕರು, ಮತದಾರರ ಮನ ಗೆಲ್ಲುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ, ಸಾರ್ವಜನಿಕ ಕ್ಷೇತ್ರದಿಂದ ದೂರ ಉಳಿದಿದ್ದ ಡಾ.ಯತೀಂದ್ರ ಅವರು ತಮ್ಮ ಸೋದರ ರಾಕೇಶ್ ನಿಧನಾ ನಂತರ ತಂದೆ ಹಾಗೂ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಹಾಗಾಗಿ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಕಡೆ ಹೆಚ್ಚು ಗಮನ ಹರಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಕಣಕ್ಕಿಳಿಯುವುದು ಹಾಗೂ ವರುಣಾ ಕ್ಷೇತ್ರದಲ್ಲಿ ಅವಕಾಶ ನೀಡಿದರೆ ಯತೀಂದ್ರ ಕಣಕ್ಕಿಳಿಯಲು ಸಿದ್ಧರಾಗಿದ್ದು, ಅದಕ್ಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇಂದಿನಿಂದಲೇ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆ, ಕುಂದುಕೊರತೆಗಳ ಸ್ವೀಕಾರ, ಕಾರ್ಯಕರ್ತರೊಂದಿಗೆ ಚರ್ಚೆ, ಪಕ್ಷ ಸಂಘಟನೆ, ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ಹೊರಲು ಮುಂದಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin