ಪತ್ರಕರ್ತರ ಜೈಲು ಶಿಕ್ಷೆಗೆ ತಾತ್ಕಾಲಿಕ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

Ravi-Belegere--01

ಬೆಂಗಳೂರು, ಜೂ.29-ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ರಕರ್ತರ ರವಿಬೆಳೆಗೆರೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಸೂಚನೆ ನೀಡಿದ್ದಾರೆ. ಹಕ್ಕು ಬಾಧ್ಯತಾ ಸಮಿತಿ ರವಿಬೆಳೆಗೆರೆ ಹಾಗೂ ಅನಿಲ್‍ರಾಜ್ ಅವರಿಗೆ ಒಂದು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು.  ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದರು. ಜೈಲು ಶಿಕ್ಷೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್ ಕೋಳಿವಾಡ ಅವರಿಗೆ ಮನವಿ ಮಾಡಿದ್ದರು.

ಅನಾರೋಗ್ಯ ಇರುವ ಕಾರಣ ಶಿಕ್ಷೆ ತಡೆಹಿಡಿಯುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ರವಿಬೆಳೆಗೆರೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ಕೋಳಿವಾಡ ಅವರು ಸೂಚನೆ ನೀಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿ ಮರು ಪರಿಶೀಲಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದರು. ಚುನಾವಣಾ ಸಮಯದಲ್ಲಿ ಇಂತಹ ಬೆಳವಣಿಗೆ ಸರಿಯಲ್ಲ. ಪತ್ರಕರ್ತರನ್ನು ಜೈಲಿಗೆ ಕಳುಹಿಸಿದ ಅಪಕೀರ್ತಿ ನಮಗೆ ಬರುವುದು ಬೇಡ. ವಿಪಕ್ಷಗಳು ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಹಲವು ಶಾಸಕರು ಮುಖ್ಯಮಂತ್ರಿಗಳ ಮೇಲೆ ತೀವ್ರ ಒತ್ತಡ ತಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸ್ಪೀಕರ್ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಪತ್ರಕರ್ತರ ಜೈಲು ಶಿಕ್ಷೆಗೆ ತಾತ್ಕಾಲಿಕವಾಗಿ ತಡೆ ಬಿದ್ದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin