ಹಳೆಯ 500ರೂ. ಮುಖಬೆಲೆಯ ನೋಟು ಸಾಗಣೆ ಮಾಡುತ್ತಿದ್ದ ಓರ್ವನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ, ಜೂ.29- ನಿಷೇಧಿತ 500ರೂ. ನೋಟುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ಮೂಲದ ರಶೀದ್ ಬಂಧಿತ ಆರೋಪಿ. ಈತ ಹಳೆಯ 500ರ ಒಟ್ಟು 10 ಲಕ್ಷ ಮೌಲ್ಯದ ನೋಟುಗಳನ್ನು ಬಾಂಡಿಶೆಟ್ಟಿ ಬಡಾವಣೆಯಲ್ಲಿ ಸಾಗಣೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಕಾರವಾರ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಸಿಪಿಐ ಶರಣಪ್ಪಗೌಡ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನಿಷೇಧಿತ ನೋಟುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Facebook Comments

Sri Raghav

Admin