ಐಜಿಪಿ ಮುರುಗನ್ ಪ್ರಯಾಣಿಸುತ್ತಿದ್ದ ಕಾರಿಗೆ ಮುಂದಿನಿಂದ ಟಾಟಾ ವಾಹನ ಹಿಂದಿನಿಂದ ಟಿಪ್ಪರ್ ಡಿಕ್ಕಿ

ಈ ಸುದ್ದಿಯನ್ನು ಶೇರ್ ಮಾಡಿ

Bellary-Accident

ಬಳ್ಳಾರಿ, ಜೂ.30-ಬಳ್ಳಾರಿ ವಲಯದ ಐಜಿಪಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದ್ದು, ಐಜಿಪಿ ಮುರುಗನ್ ಹಾಗೂ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಈ ಅಘಾತದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿನಲ್ಲಿ ಕುಡಿತಿನಿ ಬಿಟಿಎಸ್ ಪ್ಲಾಂಟ್ ಮುಂದೆ ಇನ್ನೋವಾ ಕಾರಿಗೆ ಮುಂದಿನಿಂದ ಬಂದ ಟಾಟಾ ವಾಹನ ಹಾಗೂ ಹಿಂದಿನಿಂದ ಬಂದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಕಾರಿಗೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಕಾರು ಮಾತ್ರ ಜಖಂಗೊಂಡು ಕಾರಿನಲ್ಲಿದ್ದ ಚಾಲಕ ಹಾಗೂ ಐಜಿಪಿಯವರು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದು, ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.  ಬಳ್ಳಾರಿ ವಲಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಹಲವು ಪೊಲೀಸ್ ಅಧಿಕಾರಿಗಳು ದಿಟ್ಟ ಕ್ರಮ ಕೈಗೊಳ್ಳಲು ಮುಂದಾಗುತ್ತಾರೆ. ಇಂತಹ ಸಂದರ್ಭದಲ್ಲಿ ದಕ್ಷ ಅಧಿಕಾರಿಗಳನ್ನು ಈ ರೀತಿ ಮುಗಿಸುವ ಕೃತ್ಯವೇನಾದರೂ ನಡೆದಿದೆಯೇ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin