ಜಮ್ಮು-ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತದಿಂದ ಅಮರನಾಥ ಯಾತ್ರೆ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

Jammu--01

ಜಮ್ಮು, ಜೂ.30- ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಭೂಕುಸಿತ ಉಂಟಾಗಿದ್ದು, ಕಣಿವೆ ರಾಜ್ಯದ ಜಮ್ಮು-ಶ್ರೀನಗರ ನಡುವಿನ 300 ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತದಿಂದ ಗುಡ್ಡಗಳು ರಸ್ತೆಗೆ ಬಿದ್ದಿವೆ.   ರಾಮ್‍ಧನ್ ಮತ್ತು ಪಂಥಿಯಾಲ್ ಪ್ರದೇಶದ ನಡುವಿನ ಮೂರ್ನಾಲ್ಕು ಸ್ಥಳಗಳಲ್ಲಿ ಈ ಭೂಕುಸಿತ ಉಂಟಾಗಿದೆ.

ಯಾತ್ರೆ ಸ್ಥಗಿತ: ಭಾರೀ ಮಳೆ ಸುರಿಯುತ್ತಿದ್ದು, ಜಮ್ಮು-ಕಾಶ್ಮೀರದ ಅಲ್ಲಲ್ಲಿ ಭೂಕುಸಿತವೂ ಸಂಭವಿಸುತ್ತಿರುವುದರಿಂದ ಕಳೆದ ಮೂರು ದಿನಗಳ ಹಿಂದಷ್ಟೆ ಆರಂಭವಾಗಿದ್ದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಿಂದಲೂ ಅನೇಕ ಜನ ಭಕ್ತರು ಅಮರನಾಥ ಯಾತ್ರೆಗೆ ತೆರಳಿದ್ದು, ಇನ್ನೂ ಅವರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin