ಮಾಜಿ ಸಂಸದ ಎಚ್.ವಿಶ್ವನಾಥ್ ಜು.4ರಂದು ಜೆಡಿಎಸ್ ಗೆ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

H-Vishwanath

ಮೈಸೂರು, ಜು.2- ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು ಜು.4ರಂದು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ನೇತೃತ್ವದಲ್ಲಿ ವಿದ್ಯುಕ್ತವಾಗಿ ಜು.4ರಂದು ಜೆಡಿಎಸ್ ಪಕ್ಷ ಸೇರುವುದಾಗಿ ತಿಳಿಸಿದರು.  40 ವರ್ಷಗಳ ಕಾಲ ರಾಷ್ಟ್ರೀಯ ಪಕ್ಷ ಕಾಂಗ್ರೆಸ್‍ನಲ್ಲಿ ಇದ್ದೆ. ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರೀಯ ಪಕ್ಷಗಳ ವರ್ತನೆಯಿಂದ ಬೇಸತ್ತಿದ್ದೇನೆ. ಪ್ರಾದೇಶಿಕ ಪಕ್ಷ ಮನ ಸೆಳೆದಿದೆ. ಹಾಗಾಗಿ ನಾನು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಸೇರುತ್ತಿದ್ದೇನೆ. ಈ ಪಕ್ಷದ ಮೂಲಕ ನನ್ನ ಕನಸು ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಿಗದೆ ಎಂದು ಹೇಳಿದರು.
ನಾನು ಪಿಚ್ ಮಾತ್ರ ಬದಲಾವಣೆ ಮಾಡುತ್ತಿದ್ದೇನೆ. ನನ್ನ ರಾಜಕೀಯ ಗೇಮ್‍ಅನ್ನು ಅಲ್ಲ. ಕಾಂಗ್ರೆಸ್‍ನಲ್ಲಿ ನನ್ನ ಪಿಚ್ ಇತ್ತು. ಈಗ ಆ ಪಿಚ್ ಜೆಡಿಎಸ್‍ನಲ್ಲಿ ಇದೆ. ರಾಜಕೀಯ ಗೇಮ್ ಯಥಾಸ್ಥಿತಿ ಮುಂದುವರಿಯಲಿದೆ ಎಂದು ವಿಶ್ವನಾಥ್ ಮಾರ್ಮಿಕವಾಗಿ ನುಡಿದರು. ನಾಲ್ಕು ದಶಕಗಳ ಕಾಲ ಕಾಂಗ್ರೆಸ್‍ನಲ್ಲಿ ಸೇವೆ ಸಲ್ಲಿಸಿದ್ದೇನೆ. ಆ ಪಕ್ಷ ತೊರೆಯಬೇಕಾದ ಕಾರಣಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಅವರು, ಮುಂದೆ ಜೆಡಿಎಸ್‍ನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ವಿವರಿಸಿದರು.  ರಾಜಕೀಯ ಒಳ-ಹೊರಗುಗಳ ಬಗ್ಗೆ ತಮ್ಮ ಸಾಹಿತ್ಯಿಕ ಶೈಲಿಯಲ್ಲಿಯೇ ವಿಶ್ವನಾಥ್ ಮಾತನಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin