ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಮರಳಿ ಬಿಜೆಪಿಗೆ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Krishnaiah-Shetty
ಬೆಂಗಳೂರು, ಜು.2-ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಇಂದು ಮತ್ತೆ ಮರಳಿ ಬಿಜೆಪಿಗೆ ಸೇರ್ಪಡೆಯಾದರು.  ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕೃಷ್ಣಯ್ಯ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡರು. ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ವಿಧ್ಯುಕ್ತವಾಗಿ ಬಿಜೆಪಿ ಸೇರಿದ ಕೃಷ್ಣಯ್ಯ ಶೆಟ್ಟಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.  ಚುನಾವಣೆ ನಂತರ ರಾಜಕೀಯ ಪಕ್ಷಗಳಿಂದ ದೂರ ಉಳಿದಿದ್ದ ಶೆಟ್ಟಿ, ಈಗ ಮತ್ತೆ ತಮ್ಮ ತವರು ಪಕ್ಷ ಬಿಜೆಪಿಯನ್ನು ಸೇರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin