ಆರ್‍ಎಸ್‍ಎಸ್ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ, ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Mangaluru--01

ಬಂಟ್ವಾಳ,ಜು.5-ನಿಷೇಧಾಜ್ಞೆ ಮತ್ತು ಭಾರೀ ಬಿಗಿಬಂದೋಬಸ್ತ್ ನಡುವೆಯೂ ಅಪರಿಚಿತ ದುಷ್ಕರ್ಮಿಗಳು ಆರ್‍ಎಸ್‍ಎಸ್ ಕಾರ್ಯಕರ್ತನೊಬ್ಬನ ಮೇಲೆ ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.   ಬಂಟ್ವಾಳ ತಾಲ್ಲೂಕಿನ ಕಂದೂರು ನಿವಾಸಿ ಶರತ್ ತನ್ನ ಲಾಂಡ್ರಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುವ ಸಂದರ್ಭ ಮೂವರು ಮುಸುಕುಧಾರಿಗಳು ಅವನ ಮೇಲೆ ದಾಳಿ ನಡೆಸಿದ್ದಾರೆ.  ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್‍ಕುಮಾರ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವಂತೆ ಸೂಚಿಸಿದ್ದಾರೆ. ಗಾಯಾಳು ಶರತ್‍ನನ್ನು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin