ಭಾರತೀಯ ವಿಜ್ಞಾನ ಸಂಸ್ಥೆ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Pranab-Mukharjee

ಬೆಂಗಳೂರು,ಜು.5-ನಗರದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಆಯೋಜಿಸಿದ್ದ ಭಾರತೀಯ ವಿಜ್ಞಾನ ಸಂಸ್ಥೆಯ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡಿದ್ದರು. ಮಲ್ಲೇಶ್ವರಂನಲ್ಲಿರುವ ಐಐಎಸ್‍ಸಿಯ ಟಾಟಾ ಸಭಾಂಗಣದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

Pranab-Mukharjee-02

ಮಧ್ಯಾಹ್ನ 12.55ಕ್ಕೆ ಸರಿಯಾಗಿ ಬೆಂಗಳೂರಿನ HAL  ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿ ಬರಮಾಡಿಕೊಂಡರು.  ನಂತರ ರಾಷ್ಟ್ರಪತಿಯವರು ನೇರವಾಗಿ ಜೆ.ಎನ್.ಟಾಟಾ ಸಭಾಂಗಣಕ್ಕೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin