ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾದಳ

ಈ ಸುದ್ದಿಯನ್ನು ಶೇರ್ ಮಾಡಿ

Tamil-Fishermen-Srilanka

ರಾಮೇಶ್ವರಂ,ಜು.6-ಸಮುದ್ರದಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದ ತಮಿಳುನಾಡು ಮೂಲದ ಎಂಟು ಬೆಸ್ತರನ್ನು ಶ್ರೀಲಂಕಾ ನೌಕಾದಳದ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ಪುದುಕೋಟೈ ಜಿಲ್ಲೆಯ ಕೊಟ್ಟೀಪಟ್ಟಿನಂ ಮೂಲದ ಬೆಸ್ತರು ಅಕ್ರಮವಾಗಿ ಶ್ರೀಲಂಕಾದ ಸಮುದ್ರದಲ್ಲಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಅಲ್ಲಿನ ನೌಕಾದಳ ಅಧಿಕಾರಿಗಳು ಅವರನ್ನು ಬಂಧಿಸಿ ಎರಡು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೀನುಗಾರಿಕೆ ವಿಭಾಗದ ಉಪ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.
ಅಲ್ಲದೆ ನೆಡುಂತೀವ್ ತೀರ ಪ್ರದೇಶದಲ್ಲಿ ಮೀನು ಹಿಡಿಯುವ ಸಂದರ್ಭದಲ್ಲಿ ಬೋಟ್‍ನಲ್ಲಿ ಮುಳುಗುತ್ತಿದ್ದ ನಾಲ್ವರನ್ನು ಇತರ ಮೀನುಗಾರರು ರಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin