ಮಕ್ಕಳೆದುರೇ ಮಹಿಳೆ ಮೇಲೆ ಗ್ಯಾಂಗ್‍ರೇಪ್ ಮಾಡಿದ ನಾಲ್ವರು ಕಾಮುಕರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

rape--case

ವಿಶಾಖಪಟ್ಟಣಂ, ಜು.6-ದುಷ್ಕರ್ಮಿಗಳಿಬ್ಬರು 35 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆ ಮೂವರು ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.   ಈ ಸಂಬಂಧ ಇಬ್ಬರು ಆರೋಪಿಗಳು ಮತ್ತು ಇನ್ನಿಬ್ಬರು ಅವರ ಸಹಚರರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಗಾಜುವಾಕಾ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ಮಂಗಳವಾರ ರಾತ್ರಿ ದೂರು ನೀಡಿದ್ದರು. ನನ್ನ ಪತಿ ಕೆಲಸಕ್ಕೆ ಹೋಗಿದ್ದಾಗ ಸೋಮವಾರ ರಾತ್ರಿ ಓರ್ವ ಅಪ್ರಾಪ್ತ ಸೇರಿ ನಾಲ್ವರು ಮನೆಗೆ ನುಗ್ಗಿದರು. ಅವರಲ್ಲಿ ಇಬ್ಬರು, ನನ್ನ ಮಕ್ಕಳೆದುರೇ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು.

ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದ ಸಂಬಂಧ ಎಲ್ಲ ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗಾಜುವಾಕಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಟಿ. ಇಮ್ಯಾನುಯೆಲ್ ರಾಜು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin