ಐದು ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಸಚಿವ ಟಿ.ಬಿ.ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

TB-Jayachandra

ತುಮಕೂರು, ಜು.8- ತುಮಕೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ತೆರೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸರಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಇಲ್ಲದ ಕಡೆಗಳಲ್ಲಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ತೆರೆದು ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕೆಂಬುದು ಸರಕಾರದ ಉದ್ದೇಶವಾಗಿದೆ. ಇದಕ್ಕಾಗಿ ಸಾರ್ವಜನಿಕರ ಸಹಕಾರ ಕೋರಲಾಗಿದೆ ಎಂದರು.

ಕೋಲಾರ, ದಾವಣಗೆರೆ, ವಿಜಯಪುರ, ತುಮಕೂರು ಸೇರಿದಂತೆ ಐದು ಕಡೆಗಳಲ್ಲಿ 150-200 ಬೆಡ್‍ಗಳನ್ನು ಒಳಗೊಂಡ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ತೆರೆಯಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ್ತಿದೆ. ತುಮಕೂರು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಇದರಿಂದ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ನುಡಿದರು. ನಗರದಲ್ಲಿ ಚಿಕೂನ್‍ಗುನ್ಯಾ ಮತ್ತು ಡೆಂಗ್ಯೂ ರೋಗ ಉಲ್ವಣಿಸುತ್ತಿರುವ ನಮ್ಮ ಗಮನಕ್ಕೆ ಬಂದಿದ್ದು ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ನಗರಪಾಲಿಕೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಪಾಲಿಕೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.  ಶಾಸಕ ಡಾ.ರಫೀಕ್ ಅಹಮದ್ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin