ಮಂಗಳೂರಿನಲ್ಲಿ ಗಲಾಟೆ ನಿಯಂತ್ರಿಸಲು ಸರ್ಕಾರ ವಿಫಲ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

eshwarappa

ಶಿವಮೊಗ್ಗ ,ಜು.8- ಮಂಗಳೂರಿನಲ್ಲಿ ಎರಡು ಕೋಮುಗಳ ಮಧ್ಯೆ ನಡೆದ ಗಲಾಟೆ ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಆರ್‍ಎಸ್‍ಎಸ್ ಮುಖಂಡರ ಹತ್ಯೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದ್ದು, ಎರಡು ಕೋಮುಗಳ ನಡುವಿನ ಗಲಾಟೆಯನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗಲಾಟೆಯಲ್ಲಿ ದೇಶದ್ರೋಹಿಗಳು ಲಾಭ ಪಡೆದುಕೊಳ್ಳುತ್ತಿದ್ದಾರೆ. ದೇಶಭಕ್ತರಿಗೆ ಬೆದರಿಕೆ ಹಾಕುತ್ತಿದ್ದು ,ಅಂಥವರ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ದಕ್ಷಿಣ ಕನ್ನಡ ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆಯೇ..?

View Results

Loading ... Loading ...

ಇತ್ತೀಚಿನ ದಿನಗಳಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆಯುತ್ತಲೇ ಇದೆ. ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡಬೇಕು. ಮುಂದೆ ಇಂತಹ ಘಟನೆ ನಡೆದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin