ಪಿಎಂಎವೈ ಯೋಜನೆಯಡಿ ರಾಜ್ಯದ ಕೊಳಗೇರಿಗಳಲ್ಲಿ 96 ಸಾವಿರ ಮನೆ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

Home--01

ಬೆಂಗಳೂರು,ಜು.10- ಪ್ರಧಾನಮಂತ್ರಿ ಅವಾಜ್ ಯೋಜನೆ(ಪಿಎಂಎವೈ) ಯಡಿ ರಾಜ್ಯದ ಕೊಳಗೇರಿಗಳಲ್ಲಿ 96 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವ ಎಂ.ಕೃಷ್ಣಪ್ಪ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 64 ಸಾವಿರ ಮನೆಗಳನ್ನು ಮಾತ್ರ ನಿರ್ಮಿಸಲಾಗಿದ್ದು , ನಮ್ಮ ಸರ್ಕಾರದ ಅವಧಿಯಲ್ಲಿ 96 ಸಾವಿರ ಮನೆಗಳು ನಿರ್ಮಾಣವಾಗುತ್ತಿವೆ ಎಂದು ಹೇಳಿದರು.

ಮೊದಲ ಹಂತದಲ್ಲಿ 16 ಸಾವಿರ ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು , ಉಳಿದ 10 ಸಾವಿರ ಮನೆಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ರಾಜ್ಯದ ನಗರ ಪ್ರದೇಶಗಳ ಕೊಳಗೇರಿಗಳಲ್ಲಿ 19 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ 11 ಸಾವಿರ ಮನೆಗಳು ಪೂರ್ಣಗೊಂಡಿವೆ. ಉಳಿದ ಎಂಟು ಸಾವಿರ ಮನೆಗಳ ಪೈಕಿ ಮಂಡ್ಯದಲ್ಲಿ 1332 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ನಿರ್ಮಾಣವಾಗುತ್ತಿರುವ ಮನೆಗಳ ಪೈಕಿ 352 ಮನೆಗಳು ಪೂರ್ಣಗೊಂಡಿದ್ದು , ಮೂರ್ನಾಲ್ಕು ತಿಂಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗುವುದು. ಉಳಿದವರಿಗೆ ಮತ್ತೆ ಮೂರು ತಿಂಗಳ ನಂತರ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಅಲ್ಲಿಯವರೆಗೆ ತಾತ್ಕಾಲಿಕ ಶೆಡ್‍ಗಳ ಮೂಲಕ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಹೇಳಿದರು. ಸ್ಥಗಿತಗೊಂಡಿದ್ದ ಮಂಡ್ಯದ ಮೈ ಶುಗರ್ ಕಾರ್ಖಾನೆ ಪುನರಾಂಭವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin