ಬಿಹಾರ, ಅಸ್ಸಾಂ ಮತ್ತು ಯುಪಿಯಲ್ಲಿ ಮುಂಗಾರು ಆರ್ಭಟಕ್ಕೆ 56 ಮಂದಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Rain--01

ಪಾಟ್ನಾ/ಗುವಾಹತಿ/ಲಖ್ನೋ, ಜು.10-ಬಿಹಾರ, ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಸಿಡಿಲು ಬಡಿದು 30ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಭಾರೀ ವರ್ಷಧಾರೆ ಮತ್ತು ಪ್ರವಾಹದಿಂದ ಲಕ್ಷಾಂತರ ಮಂದಿ ಅತಂತ್ರರಾಗಿದ್ದು, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ.
ಬಿಹಾರದ ಏಳು ಜಿಲ್ಲೆಗಳಲ್ಲಿ ಮುಂಗಾರು ಮಳೆ ರೌದ್ರಾವತಾರದಿಂದ ಸಾವು-ನೋವು ಸಂಭವಿಸಿದೆ. ಸಿಡಿಲು ಬಡಿದು 19 ಮಂದಿ ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ವೈಶಾಲಿ ಜಿಲ್ಲೆಯಲ್ಲಿ ಐವರು, ಪಾಟ್ನಾ ಮತ್ತು ಭೋಜ್‍ಪುರ್‍ನಲ್ಲಿ ತಲಾ ಮೂವರು, ಸರನ್‍ನಲ್ಲಿ ಇಬ್ಬರು ಹಾಗೂ ರೋತಾಸ್, ನಳಂದ ಮತ್ತು ಅರಾರಿಯಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲಿನ ಆರ್ಭಟಕ್ಕೆ ಮೃತಪಟ್ಟಿದ್ದಾರೆ.

ಅಸ್ಸಾಂನಲ್ಲಿ ಮೃತರ ಸಂಖ್ಯೆ 26ಕ್ಕೆ :

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ಈವರೆಗೆ ನೈಸರ್ಗಿಕ ವಿಕೋಪದಿಂದ 26 ಮಂದಿ ಸಾವಿಗೀಡಾಗಿದ್ದಾರೆ. 15 ಜಿಲ್ಲೆಗಳ ಐದು ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ. 1,096 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, 41,200 ಹೆಕ್ಟೇರ್ ಬೆಳೆ ಸಂಪೂರ್ಣ ನಾಶವಾಗಿದೆ. ಬ್ರಹ್ಮಪುತ್ರ ನದಿ ಅಪಾಯಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ನಿಮತಿಘಾಟ್, ತೇಜ್‍ಪುರ್, ದಿಬ್ರುಗಢ್, ಗೋಲ್‍ಪಾರಾ, ದುಬ್ರಿ ಪಟ್ಟಣಗಳು ನೆರೆ ಹಾವಳಿಯಿಂದ ತೀವ್ರ ಹಾನಿಗೊಳಗಾಗಿವೆ.  ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೋವಾಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅಗತ್ಯವಾದ ಸಕಲ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ವರುಣನ ರೌದ್ರಾವತಾರ :

ಉತ್ತರಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಗಾಹ್‍ಗ್ರಾ ಮತ್ತು ಶಾರದಾ ಉಪ ನದಿಗಳು ಉಕ್ಕಿ ಹರಿಯುತ್ತಿದ್ದು. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin