ಮೈಸೂರು ಜೆಡಿಎಸ್‍ನಲ್ಲಿ ಭಿನ್ನಮತ ಸ್ಫೋಟ

ಈ ಸುದ್ದಿಯನ್ನು ಶೇರ್ ಮಾಡಿ

jds

ಮೈಸೂರು, ಜು.10- ಹುಣಸೂರಿನ ಜೆಡಿಎಸ್‍ನಲ್ಲಿ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಮೈಸೂರು ನಗರ ಜೆಡಿಎಸ್‍ನಲ್ಲೂ ಇದೀಗ ಭಿನ್ನಮತ ಸ್ಫೋಟಗೊಂಡಿದೆ. ಪ್ರೊ.ರಂಗಪ್ಪ ಅವರು ಇಂದು ಸಂಜೆ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ನಗರದ ಜೆಡಿಎಸ್ ಅಧ್ಯಕ್ಷ ಹರೀಶ್‍ಗೌಡ ಅವರು ರಂಗಪ್ಪನವರ ಸೇರ್ಪಡೆಗೆ ಅಪಸ್ವರ ಎತ್ತಿದ್ದಾರೆ.

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹರೀಶ್ ಗೌಡ ಅವರು ಹಲವಾರು ತಿಂಗಳುಗಳಿಂದ ಈ ಕ್ಷೇತ್ರದಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ತಮಗೆ ಈ ಕ್ಷೇತ್ರದಿಂದ ಟಿಕೆಟ್ ಸಿಗುತ್ತದೆ ಎಂಬ ಹಿನ್ನೆಲೆಯಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಇತ್ತೀಚಿನ ರಾಜಕೀಯ ದಿಢೀರ್ ಬೆಳವಣಿಗೆಯಲ್ಲಿ ಜೆಡಿಎಸ್‍ಗೆ ಸೇರ್ಪಡೆಗೊಳ್ಳುತ್ತಿರುವ ಪ್ರೊ.ರಂಗಪ್ಪ ಅವರಿಗೆ ಚಾಮರಾಜ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಹುತೇಕ ಟಿಕೆಟ್ ಖಚಿತವಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರ ಜೆಡಿಎಸ್‍ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin