ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

yadiyurappa--01ಶಿವಮೊಗ್ಗ, ಜು.10- ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಸಾಲ ಮನ್ನಾಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಇಂದು ಮುತ್ತಿಗೆ ಹಾಕಿದ ಘಟನೆ ನಡೆಯಿತು. ಇಂದು ಬೆಳಗ್ಗೆಯೇ ಇಲ್ಲಿನ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದ ಬಳಿ ಜಮಾಯಿಸಿದ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾಧ್ಯಕ್ಷರ ಮನೆಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಈ ಸಂದರ್ಭ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಅವರನ್ನು ತಡೆದು ಕೆಲವು ಮಂದಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯದ ಸಹಕಾರ ಬ್ಯಾಂಕ್‍ಗಳಲ್ಲಿರುವ ಎಲ್ಲಾ ರೈತರ 50,000 ರೂ. ವರೆಗಿನ ಸಾಲ ಮನ್ನಾ ಮಾಡಿದೆ. ಇದರಿಂದ ಲಕ್ಷಾಂತರ ರೈತರು ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದರು. ಈಗ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ರೈತರ ಹೆಚ್ಚಿನ ಮೊತ್ತದ ಸಾಲವನ್ನು ಕೇಂದ್ರ ಸರ್ಕಾರವು ಮನ್ನಾ ಮಾಡಬೇಕಾಗಿದ್ದು, ಈ ಕುರಿತಂತೆ ಪ್ರಧಾನಿ ಮೋದಿ ಸರ್ಕಾರದ ಮೇಲೆ ರಾಜ್ಯ ಬಿಜೆಪಿ ನಾಯಕರು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin