ಶೀತಲೀಕರಣ ಘಟಕಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂ. ಲಕ್ಷಾಂತರ ರೂ. ಮೌಲ್ಯದ ನಷ್ಟ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಜು.10-ಶೀತಲೀಕರಣ ಘಟಕದಲ್ಲಿ (ಕೋಲ್ಡ್ ಸ್ಟೋರೇಜ್ ಸೆಂಟರ್) ಮಧ್ಯರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಹಾಳಾಗಿವೆ. ತಾಲೂಕಿನ ವಡಗೂರು ಗ್ರಾಮದಲ್ಲಿ ಸುಮಾರು 10 ಚದರ ಅಡಿ ವಿಸ್ತೀರ್ಣದ 5 ಕಂಪಾರ್ಟ್‍ಮೆಂಟ್‍ಗಳುಳ್ಳ ಹಣ್ಣುಗಳ ಶೀತಲೀಕರಣ ಘಟಕವಿದ್ದು, ಮಧ್ಯರಾತ್ರಿ 1.30ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಸ್ಥಳೀಯರು ಇದನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ರಾಘವೇಂದ್ರ ನೇತೃತ್ವದಲ್ಲಿ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲಾಗಲೇ ಘಟಕದಲ್ಲಿ ಸಂಗ್ರಹಿಸಲಾಗಿದ್ದ ಮಾವು ಹಾಗೂ ಪಪ್ಪಾಯ ಹಣ್ಣುಗಳು ಸಂಪೂರ್ಣ ಹಾಳಾಗಿವೆ. ಈ ಸಂಬಂಧ ಘಟಕದ ಮಾಲೀಕ ಸುಬ್ರಮಣಿ ಠಾಣೆಗೆ ದೂರು ನೀಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin