ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅವ್ಯವಹಾರದ ತನಿಖೆಗೆ ಸಿಎಂ ಆದೇಶ

Parappana-Agraha-r-021

ಕೊಪ್ಪಳ, ಜು.13- ಬೆಂಗಳೂರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.  ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹ ಇಲಾಖೆ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಯವರು ಉನ್ನತ ಮಟ್ಟದ ತನಿಖೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ.

ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ವಿಚಾರಣೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಅವರು ತಮ್ಮ ಆದೇಶದಲ್ಲಿ
ಸೂಚಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin