ಮತ್ತೆ 7 ಭಾರತೀಯ ಮೀನುಗಾರರನ್ನು ಬಂಧಿಸಿದ ಲಂಕಾ ನೌಕಾಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Tamil-Fishermen-Srilanka

ನಾಗಪಟ್ಟಣಂ,ಜು.13- ಜಲಗಡಿ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಶ್ರೀಲಂಕಾ ನೌಕಾಪಡೆ 7 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.  ಪಾಲ್ಕ್ ಸ್ಟ್ರೇಟ್ ಪ್ರದೇಶದಲ್ಲಿರುವ ನೆಡುಂಥೆವು ದ್ವೀಪದ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿರುವ ಶ್ರೀಲಂಕಾ ನೌಕಾಪಡೆ ತಮಿಳುನಾಡಿನ 7 ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದು, ಎರಡು ಬೋಟುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಬಂಧನಕ್ಕೊಳಗಾಗಿರುವ ಮೀನುಗಾರರನ್ನು ವಿಚಾರಣೆಗಾಗಿ ಶ್ರೀಲಂಕಾಗ ಜಾಫ್ಫ್ನಾ ಜಿಲ್ಲೆಯಲ್ಲಿರುವ ಕಂಕೆಸನ್ಥು ರೈ ಬಂದರಿಗೆ ಕರೆದೊಯ್ದಿದೆ ಎಂದು ಮೂಲಗಳು ತಿಳಿಸಿವೆ. ಜು9 ರಂದು ಮೂವರು ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದ್ದ ಶ್ರೀಲಂಕಾ ನೌಕಾಪಡೆ, 1 ದೋಣಿಯನ್ನು ವಶಕ್ಕೆ ಪಡೆಯಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin