ಈಶಾನ್ಯದಲ್ಲಿ ಜಲಪ್ರಳಯ : ಸತ್ತವರ ಸಂಖ್ಯೆ 90ಕ್ಕೇರಿಕೆ, 20 ಲಕ್ಷ ಜನ ಅತಂತ್ರ

ಈ ಸುದ್ದಿಯನ್ನು ಶೇರ್ ಮಾಡಿ

Assam--01

ಗುವಾಹತಿ, ಜು.14-ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಜಲಪ್ರಳಯ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಸತ್ತವರ ಸಂಖ್ಯೆ 90ಕ್ಕೇರಿದೆ. ಈಶಾನ್ಯ ರಾಜ್ಯದಲ್ಲಿ ನೈಸರ್ಗಿಕ ವಿಕೋಪದಿಂದ 58 ಜಿಲ್ಲೆಗಳಲ್ಲಿ ಸುಮಾರು 20 ಲಕ್ಷ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಈಶಾನ್ಯ ಪ್ರಾಂತ್ಯದ ಈ ಮೂರು ರಾಜ್ಯಗಳಲ್ಲಿ ನೆರೆ ಹಾವಳಿಯಿಂದ ಈವರೆಗೆ 90 ಮಂದಿ ಮೃತಪಟ್ಟಿದ್ಧಾರೆ ಎಂದು ಈಶಾನ್ಯ ಪಾಂತ್ಯಗಳ ಅಭಿವೃದ್ದಿ ಸಚಿವ ಡಾ.ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.  ಅಸ್ಸಾಂ ರಾಜ್ಯದ 26 ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ 50ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 17 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ ಎಂದುಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‍ಡಿಎಂಎ) ಅಧಿಕಾರಿಗಳು ತಿಳಿಸಿದ್ಧಾರೆ.

ಅಸ್ಸಾಂನಲ್ಲಿ ಬುಧವಾರ ಸಂಜೆವರೆಗೆ 17,18,135 ಜನರು ನೆರೆ ಹಾವಳಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ಅಂಕಿ-ಅಂಶ ನೀಡಿದ್ದಾರೆ. ಮುಖ್ಯಮಂತ್ರಿ ಸರ್ವಾನಂದ ಸೋನೋವಾಲ್ ಪ್ರವಾಹ ಪೀಡಿತ ರಾಜ್ಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶಿಸಿದರು.   ಅರುಣಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲಿ ಮಳೆ, ಪ್ರವಾಹ ಮತ್ತು ಭೂ ಕುಸಿತದಿಂದ ಈವರೆಗೆ 35ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin