ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದ ಶೋಭಾ ಕರಂದ್ಲಾಜೆ

Shobha-Kಮೈಸೂರು, ಜು.14- ಆಷಾಢ ಮಾಸದ ಮೂರನೆ ಶುಕ್ರವಾರವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಂಸದೆ ಶೋಭಾಕರಂದ್ಲಾಜೆ ಅವರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಮುಂಜಾನೆ ಶೋಭಾಕರಂದ್ಲಾಜೆ ಅವರು ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆದರು.   ಇದಕ್ಕೂ ಮುನ್ನ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಸತ್ತುಹೋಗಿದೆ ಎಂದು ವ್ಯಂಗ್ಯವಾಡಿದರು. ಪರಪ್ಪನಅಗ್ರಹಾರದಲ್ಲಿ ನಡೆದಿದೆ ಎನ್ನಲಾದ ಚಟುವಟಿಕೆ ಸಂಬಂಧ ಮುಖ್ಯಮಂತ್ರಿ ಅವರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ವಿರುದ್ಧ ಹರಿಹಾಯ್ದ ಶೋಭಾ, ವಿಆರ್‍ಎಸ್ ತೆಗೆದುಕೊಂಡ ಕೆಂಪಯ್ಯ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಮುಖ್ಯಮಂತ್ರಿಗಳು ಮಾತನಾಡಿಸುತ್ತಾರೆ. ಸಿಎಂಗೆ ಮುಸ್ಲಿಂ ಎಂಬ ಪದ ಬಳಸಲು ಭಯವಿದೆ. ವೋಟ್‍ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.  ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ದೇವಿ ಶಕ್ತಿ ನೀಡಲೆಂದು ಬೇಡಿಕೊಂಡಿದ್ದೇನೆ. ಪ್ರತೀ ವರ್ಷದಂತೆ ಈ ವರ್ಷವೂ ಚಾಮುಂಡಿ ಬೆಟ್ಟ ಹತ್ತಿ ಪೂಜೆ ಸಲ್ಲಿಸಿದ್ದು, ನಾಡಿನ ಜನತೆ ಸುಭೀಕ್ಷವಾಗಿರಲಿ, ಮಳೆ, ಬೆಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin