ತಮಿಳುನಾಡಿಗೆ ನೀರು ಬಿಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ

s-sIDDARAMAIHA-cm

ಮೈಸೂರು, ಜು.14- ನ್ಯಾಯಾಧೀಕರಣದ ತೀರ್ಪಿನಂತೆ ಜುಲೈ ತಿಂಗಳಲ್ಲಿ ತಮಿಳುನಾಡಿಗೆ 50 ಟಿಎಂಸಿ ನೀರು ಬಿಡಬೇಕಿತ್ತು. ಈವರೆಗೆ ಐದು ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ಕಾವೇರಿ ನೀರು ಬಿಟ್ಟಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಲ್ಲದೆ ಜಲಾಶಯಗಳಲ್ಲಿ ನೀರಿಲ್ಲ. ಅಲ್ಪಸ್ವಲ್ಪ ಮಳೆಯಿಂದ ಸ್ವಲ್ಪ ಪ್ರಮಾಣದ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಅದರಲ್ಲೇ ಸ್ವಲ್ಪ ಪ್ರಮಾಣದ ನೀರನ್ನು ಹರಿಸಿದ್ದೇವೆ.

ತೀರ್ಪಿನಂತೆ 50 ಟಿಎಂಸಿ ನೀರನ್ನು ಬಿಡಬೇಕಾಗಿತ್ತು. ಅದು ಸಾಧ್ಯವಾಗದ ಕಾರಣ ಈವರೆಗೆ ಐದು ಟಿಎಂಸಿ ನೀರು ಬಿಡಲಾಗಿದೆ. ಮಳೆ ಬಂದು ಜಲಾಶಯ ತುಂಬಿದರೆ ಮಾತ್ರ ನೀಡು ಬಿಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮಳೆ ಬಾರದ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದ್ದು, ಮೋಡ ಬಿತ್ತನೆಗೆ ಟೆಂಡರ್ ಕರೆಯಲಾಗಿದೆ. ತಿಂಗಳಾಂತ್ಯದೊಳಗೆ ಮಳೆ ಬರುವ ನಿರೀಕ್ಷೆ ಇದೆ. ಮಳೆ ಬಾರದಿದ್ದರೆ ಮೋಡ ಬಿತ್ತನೆ ಮಾಡಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin