ಬಿಜೆಪಿಯವರು ಹಚ್ಚಿದ ಬೆಂಕಿಯನ್ನು ನಾವು ಆರಿಸುತ್ತಿದ್ದೇವೆ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಮೈಸೂರು, ಜು.14-ರಾಜ್ಯದಲ್ಲಿ ಬಿಜೆಪಿಯವರು ಕತ್ರಿ ಹಿಡಿದು ಕತ್ತರಿಸುವ ಕೆಲಸ ಮಾಡುತ್ತಿದ್ದರೆ, ನಾವು ಸೂಜಿ-ದಾರ ಇಟ್ಟುಕೊಂಡು ಹೊಲಿಯುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಚಾಮರಾಜನಗರದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ, ನಾವು ಬೆಂಕಿ ಆರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಶವ ಪೆಟ್ಟಿಗೆಗೆ ಮೊಳೆ ಹೊಡೆಯುವ ಕೆಲಸ ಮಾಡ್ತೀವಿ ಎಂದಿದ್ದಾರೆ. ಅವರ ಪಕ್ಷದವರು ಬೆಂಕಿ ಹಚ್ಚುವ, ಕತ್ತರಿಸುವ, ಮೊಳೆ ಹೊಡೆಯುವಂತಹ ಕೆಲಸ ಮಾಡುತ್ತಾರೆ. ಅವರಿಗೆ ಸಂಸ್ಕøತಿ ಗೊತ್ತಿಲ್ಲ, ಅವರು ಗೋಮು ಗಲಭೆ ಉಂಟುಮಾಡುತ್ತಾರೆ. ನಾವು ಅದನ್ನು ಶಮನ ಮಾಡುತ್ತೇವೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ 70 ವರ್ಷವಾಗಿದ್ದರೂ ಇನ್ನೂ ಅಧಿಕಾರದ ದಾಹವಿದೆ. ನಮ್ಮಪ್ಪನ ಆಣೆ ಮುಂದಿನ ಚುನಾವಣೆಯಲ್ಲೂ ಅವರಿಗೆ ಅಧಿಕಾರ ಸಿಗುವುದಿಲ್ಲ, ಮುಖ್ಯಮಂತ್ರಿಯೂ ಆಗುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಸಂಘಟನೆಗಳಿದ್ದರೂ ಸಹ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದ ಅವರು, ನಿನ್ನೆ ಕರೆದ ಶಾಂತಿಸಭೆಗೆ ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದಗೌಡ ಯಾರೊಬ್ಬರೂ ಹೋಗಿಲ್ಲ. ಅವರಿಗೆ ಶಾಂತಿ ನೆಲೆಸುವುದು ಬೇಕಿಲ್ಲ. ಇಂತಹ ಸಭೆಯಲ್ಲಿ ಭಾಗವಹಿಸಿದರೆ ಶಾಂತಿ ಕಾಪಾಡಲು ಬದ್ಧರಾಗಿರಬೇಕಾಗುತ್ತದೆ. ಹಾಗಾಗಿ ಅವರು ಶಾಂತಿಸಭೆಗೆ ಬರುತ್ತಿಲ್ಲ ಎಂದು ಕಿಡಿಕಾರಿದರು.
ಮಂಗಳೂರು ಪರಿಸ್ಥಿತಿ ಹತೋಟಿಗೆ ತರಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗುತ್ತಿದೆ ಎಂದರು.

ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಂಪಯ್ಯ ಅವರು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿಷಯಗಳಲ್ಲಿ ಯಾವುದೇ ರೀತಿಯಲ್ಲೂ ಪಾತ್ರ ನಿರ್ವಹಿಸಿಲ್ಲ. ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಸಲಹೆಗಾರರಾಗಿ ನಮ್ಮೊಂದಿಗಿದ್ದಾರೆ. ಅರ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.

ನೀರು ಬಿಟ್ಟಿದ್ದೇವೆ:

ತಮಿಳುನಾಡಿಗೆ ಜೂನ್‍ನಲ್ಲಿ 10 ಹಾಗೂ ಜುಲೈನಲ್ಲಿ 50 ಟಿಎಂಸಿ ನೀರು ಬಿಡಬೇಕು.ನಮ್ಮಲ್ಲಿಯೂ ನೀರು ಇಲ್ಲದ ಹಿನ್ನೆಲೆಯಲ್ಲಿ 4-5 ಟಿಎಂಸಿ ನೀರು ಬಿಟ್ಟಿದ್ದೇವೆ. ಅವರು ನ್ಯಾಯಾಲಯಕ್ಕೆ ಹೋದ ಸಂದರ್ಭದಲ್ಲಿ ನೀರೇ ಬಿಟ್ಟಿಲ್ಲ ಎಂದರೆ ತಪ್ಪಾಗುತ್ತದೆ. ಹಾಗಾಗಿ ನ್ಯಾಯಾಲಯಕ್ಕೆ ಉತ್ತರಿಸಲು ಇಷ್ಟು ಪ್ರಮಾಣದ ನೀರನ್ನು ಮಾತ್ರ ಬಿಟ್ಟಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin