ಬೆನ್ನಿಗಾನಹಳ್ಳಿ ಡಿ ನೋಟಿಫಿಕೇಷನ್ : ಬಿಎಸ್ವೈ, ಡಿಕೆಶಿಗೆ ಬಿಗ್ ರಿಲೀಫ್

Yadiyurappa--01-DKS

ಬೆಂಗಳೂರು, ಜು.14- ಬೆನ್ನಿಗಾನಹಳ್ಳಿ ಡಿ ನೋಟಿಫಿಕೇಷನ್ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಿಂದ ಪುನರ್ ತನಿಖೆ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.  ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೆನ್ನಿಗಾನಹಳ್ಳಿಯಲ್ಲಿ 4.5 ಎಕರೆ ಜಾಗವನ್ನು ಡಿನೋಟಿಫಿಕೇಷನ್ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಲೋಕಾಯುಕ್ತದಲ್ಲಿ ಕಬ್ಬಾಳೇಗೌಡ ಹಾಗೂ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಬೇಕೆಂದು ಕೋರಿ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಅವರು ಹೈಕೋರ್ಟ್‍ನಲ್ಲಿ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಆಕ್ಷೇಪಿಸಿ ಕಬ್ಬಾಳೇಗೌಡ ಮತ್ತು ಅಬ್ರಾಹಂ ಅವರು ಲೋಕಾಯುಕ್ತ ಸಂಸ್ಥೆ ಮೂಲಕ ಪ್ರಕರಣವನ್ನು ಪುನರ್ ತನಿಖೆ ಮಾಡಿಸಬೇಕೆಂದು ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿರ್ಕೆ ಅವರ ನ್ಯಾಯಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಕಳೆದ 2010ರಲ್ಲಿ ಬೆನ್ನಿಗಾನಹಳ್ಳಿ 4.5 ಎಕರೆ ಜಾಗವನ್ನು ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿಕೊಂಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಅವರು ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಏಳು ವರ್ಷಗಳ ಕಾನೂನು ಹೋರಾಟದ ನಂತರ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸಾಬೀತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin