ಶೇ.50 ರಷ್ಟು ಮೀಸಲಾತಿಗೆ ಮಹಿಳಾ ಸಂಘಟನೆಗಳ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

50%-Reservation

ನವದೆಹಲಿ,ಜು.14- ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಲೋಕಸಭೆಯಲ್ಲಿ ಮಹಿಳೆಯರ ಮೀಸಲಾತಿ ಮಸೂದೆಯನ್ನು ಜುಲೈ 17 ರಂದು ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಾರಿಗೆ ತರಬೇಕೆಂದು ವಿವಿಧ ಮಹಿಳಾ ಸಂಘಟನೆಗಳು ಒತ್ತಾಯಿಸಿವೆ.
ಸುಮಾರು 1,600 ಮಹಿಳಾ ಸಂಘಟನೆಗಳು ಒಗ್ಗೂಡಿ ಮೀಸಲಾತಿ ಮಸೂದೆ ಜಾರಿಗೆ ಆಗ್ರಹಿಸಿವೆ, ನಮಗೆ 33 ಪರ್ಸೆಂಟï ಮೀಸಲಾತಿ ಬೇಡ ಶೇ.50 ರಷ್ಟು ಮೀಸಲಾತಿ ಬೇಕು ಎಂದು ಸಂಘಟನೆಗಳು ಘೋಷಣೆ ಕೂಗಿವೆ.

ಆಫ್ರಿಕಾ ಸಂಸತ್ತಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರತಿನಿಧಿಗಳು ಇರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಹೇಳುತ್ತಾರೆ, ಭಾರತದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ಒಂದು ಮಾತನ್ನೂ ಆಡುವುದಿಲ್ಲ ಎಂದು ಭಾರತಿಯ ಮಹಿಳೆಯರ ರಾಷ್ಟ್ರಿಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಣ್ಣಿ ರಾಜಾ ಆರೋಪಿಸಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಿಗೆ ಮಹಿಳೆಯರು ಸ್ಪರ್ಧಿಸಲು ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಶೇ. 12 ರಷ್ಟು ಸಂಸತ್ತಿನಲ್ಲಿ, ಶೇ. 9ರಷ್ಟು ಮಾತ್ರ ವಿಧಾನಸಭೈಯಲ್ಲಿ ಮಹಿಳೆಯರಿದ್ದಾರೆ ಎಂದು ಸಾಮಾಜಿಕ ಸಂಶೋಧನಾ ಕೇಂದ್ರದ ನಿರ್ದೇಶಕಿ ರಂಜನಾ ಕುಮಾರಿ ಹೇಳಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಾಜಕೀಯಕ್ಕೆ ಬರದಿದ್ದರೇ ಅವರ ಬಗ್ಗೆಗಿನ ಕಾಳಜಿಗಳು ಪರಿಣಾಮಕಾರಿಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ. 2014ರ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ಮೀಸಲಾತಿಗೆ ಬೆಂಬಲ ನೀಡುವುದಾಗಿ ಬಿಜೆಪಿ ಘೋಷಿಸಿತ್ತು. ಈಗ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಲು ಇದು ಸಕಾಲ ಎಂದು ಸಂಘಟನೆಗಳು ಹೇಳಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin