ಸಿದ್ದರಾಮಯ್ಯನವರಿಗೆ ಮುಸ್ಲಿಂ ಎಂಬ ಪದ ಬಳಸುವ ಧೈರ್ಯವಿಲ್ಲ : ಶೋಭಾ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-vs-Shobha-kara

ಮೈಸೂರು, ಜು.14- ರಾಜ್ಯದಲ್ಲಿ ಗೃಹ ಇಲಾಖೆ ಸತ್ತುಹೋಗಿದೆ ವಾಗ್ದಾಳಿ ನಡೆಸಿದ ಸಂಸದೆ ಶೋಭಾ ಕರಂದ್ಲಾಜೆ, ಪರಪ್ಪನಅಗ್ರಹಾರದಲ್ಲಿ ನಡೆದಿದೆ ಎನ್ನಲಾದ ಚಟುವಟಿಕೆ ಸಂಬಂಧ ಮುಖ್ಯಮಂತ್ರಿ ಅವರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆಷಾಢ ಮಾಸದ ಮೂರನೆ ಶುಕ್ರವಾರವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ವಿರುದ್ಧ ಹರಿಹಾಯ್ದ ಶೋಭಾ, ವಿಆರ್‍ಎಸ್ ತೆಗೆದುಕೊಂಡ ಕೆಂಪಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕದಲ್ಲಿ ಕೂರಿಸಿಕೊಂಡು ಪೊಲೀಸ್ ಇಲಾಖೆಗೆ ಅವಮಾನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂಗೆ ಮುಸ್ಲಿಂ ಎಂಬ ಪದ ಬಳಸಲು ಭಯವಿದೆ. ಕೇವಲ ವೋಟ್‍ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ದೇವಿ ಶಕ್ತಿ ನೀಡಲೆಂದು ಬೇಡಿಕೊಂಡಿದ್ದೇನೆ ಎಂದರು. ಪ್ರತೀ ವರ್ಷದಂತೆ ಈ ವರ್ಷವೂ ಚಾಮುಂಡಿ ಬೆಟ್ಟ ಹತ್ತಿ ಪೂಜೆ ಸಲ್ಲಿಸಿದ್ದು, ನಾಡಿನ ಜನತೆ ಸುಭೀಕ್ಷವಾಗಿರಲಿ, ಮಳೆ, ಬೆಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin