ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

gun-firing

ಮಡಿಕೇರಿ,ಜು.15- ಅಣ್ಣನೇ ಗುಂಡುಹಾರಿಸಿ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹರದೂರಿನಲ್ಲಿ ನಡೆದಿದೆ. ಸುರೇಶ್ ಹತ್ಯೆಯಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಣ್ಣ ಕಾವೇರಪ್ಪ ಹಾಗೂ ತಮ್ಮ ಸುರೇಶ್ ನಡುವೆ ಮಾತಿನ ಚಕಮಕಿ ನಡೆದು ಇವರಿಬ್ಬರ ನಡುವೆ ಹೊಡೆದಾಟ ನಡೆದಿದೆ. ಇದರಿಂದ ತೀವ್ರ ಕುಪಿತನಾದ ಅಣ್ಣ ಕಾವೇರಪ್ಪ ತನ್ನ ಮನೆಯಲ್ಲಿದ್ದ ಬಂದೂಕಿನಿಂದ ತಮ್ಮ ಸುರೇಶ್ ಮೇಲೆ ಗುಂಡು ಹಾರಿಸಿದ್ದಾನೆ.

ಇದರಿಂದ ತೀವ್ರ ಗಾಯಗೊಂಡಿದ್ದ ಸುರೇಶ್‍ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin