ಗುಬ್ಬಿ ತಾಲ್ಲೂಕಿನಲ್ಲಿ ಡೆಂಘೀಗೆ ಮೂವರು ಮಕ್ಕಳು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

dengue

ಗುಬ್ಬಿ, ಜು.15- ತಾಲೂಕಿನಲ್ಲಿ ಕಳೆದ ಒಂದು ವಾರದಲ್ಲಿ ಮೂವರು ಮಕ್ಕಳು ಡೆಂಘೀಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದಿಂದ ತಾಲ್ಲೂಕಿನ ಹಿಂಡಿಸ್ಕೆರೆ ಗ್ರಾಮದಲ್ಲಿ ಮನು(15), ನಡುವಲಪಾಳ್ಯ ಗ್ರಾಮದ ಲತಾ ಎಂಬುವವರ ಪುತ್ರಿ ಕೋಮಲಾ(8), ಅಳ್ಳೇನಹಳ್ಳಿ ಗ್ರಾಮದ ಲತಾಮಣಿ ಎಂಬುವವರ ಒಂದೂವರೆ ವರ್ಷದ ಲೋಕೇಶ್ವರಿ ಹಸುಗೂಸು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ.  ತಾಲ್ಲೂಕಿನಲ್ಲಿ ದಿನೇ ದಿನೇ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ದು ಜ್ವರ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಬರುವಂತಾಗಿದೆ.

ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಡೆಂಘೀ ಜ್ವರದ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ಗ್ರಾಮ ಪಂಚಾಯ್ತಿಗಳು ಮತ್ತು ಪಟ್ಟಣ ಪಂಚಾಯ್ತಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವತ್ತ ಹೆಚ್ಚಿನ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೂಗಗಳು ಸೊಳ್ಳೆಗಳಿಂದ ಹರಡುತ್ತಿದ್ದು ಈಗಾಗಲೆ ಸಂಬಂಧಿಸಿದ ಗ್ರಾಮ ಪಂಚಾಯ್ತಿಗಳು ಮತ್ತು ಪಟ್ಟಣ ಪಂಚಾಯ್ತಿ ಸ್ವಚ್ಚತೆ ಮತ್ತು ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿವೆ ಅಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರತಿ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಲ್ಲಿ ರೋಗ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಢಿಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin