ಪ್ರಿಯಕರನ ಜೊತೆ ಸೇರಿ ಸಾಲ ಕೊಟ್ಟ ಮಹಿಳೆಯನ್ನೇ ಹತ್ಯೆ ಮಾಡಿದಳು..!

ಈ ಸುದ್ದಿಯನ್ನು ಶೇರ್ ಮಾಡಿ

Tumakuru-Murder--01

ತುಮಕೂರು, ಜು.15-ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣವನ್ನು ವಿಶೇಷ ಪೊಲೀಸ್ ತಂಡ ಭೇದಿಸುವಲ್ಲಿ ಯಶಸ್ವಿಯಾಗಿದೆ.

ಘಟನೆ ವಿವರ:

ಚಿಕ್ಕನಾಯಕನಹಳ್ಳಿ ತಾಲೂಕಿನ ಮಾಳಿಗೆಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಮ್ಮ ಎಂಬುವರಿಂದ ಅದೇ ಗ್ರಾಮದ ಉಷಾ ಎಂಬುವರು ಬಡ್ಡಿಗೆ ಹಣ ಪಡೆದು ಬಡ್ಡಿ ಹಾಗೂ ಅಸಲು ಹಣ ನೀಡದೆ ಸತಾಯಿಸುತ್ತಿದ್ದರು. ಇದರಿಂದಾಗಿ ಶಿವಲಿಂಗಮ್ಮ ಹಲವು ಬಾರಿ ಹಣ ವಾಪಸ್ ನೀಡುವಂತೆ ಉಷಾಳನ್ನು ಒತ್ತಾಯಿಸಿದ್ದರು ಎನ್ನಲಾಗಿದೆ.

ಹೇಗಾದರೂ ಮಾಡಿ ಈ ಕಾಟದಿಂದ ತಪ್ಪಿಸಿಕೊಳ್ಳಬೇಕೆಂದು ಸಂಚು ರೂಪಿಸಿದ್ದ ಉಷಾ ಪ್ಲಾನ್ ಮಾಡಿ ತನ್ನ ಪ್ರಿಯಕರನೊಂದಿಗೆ ಸೇರಿ ಕಳೆದ ತಿಂಗಳು ಸಾಲ ವಾಪಸ್ ಕೊಡುವುದಾಗಿ ನಂಬಿಸಿ ಆಕೆಯನ್ನು ಹೊಸದುರ್ಗಕ್ಕೆ ಕರೆದುಕೊಂಡು ಹೋಗಿ ಯಾರಿಗೂ ಗುರುತು ಸಿಗದ ಹಾಗೆ ಬರ್ಬರವಾಗಿ ಹತ್ಯೆ ಮಾಡಿದ್ದರು ಎಂದು ತಿಳಿದುಬಂದಿದೆ. ಹಲವು ದಿನಗಳಿಂದ ಶಿವಲಿಂಗಮ್ಮ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಕುಟುಂಬ ಮತ್ತು ಗ್ರಾಮದಲ್ಲಿ ಆತಂಕ ಸೃಷ್ಟಿಸಿತ್ತು.

ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಅವರ ಸೂಚನೆ ಮೇರೆಗೆ ತಿಪಟೂರಿನ ಡಿವೈಎಸ್‍ಪಿ ವೇಣುಗೋಪಾಲ್ ಹಾಗೂ ಚಿಕ್ಕನಾಯಕಹಳ್ಳಿಯ ವೃತ್ತ ನಿರೀಕ್ಷಕ ಮಾರಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರು ಉಷಾ ಮತ್ತು ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin