ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ 50 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರ ಸೇರ್ಪಡೆ..!

ಈ ಸುದ್ದಿಯನ್ನು ಶೇರ್ ಮಾಡಿ

Voter-ID-dgfsadggh

ಬೆಂಗಳೂರು, ಜು.15-ಮತದಾರರ ಪಟ್ಟಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ಅಕ್ರಮವಾಗಿ ಸೇರ್ಪಡೆಗೊಂಡಿರುವುದು ಬಹಿರಂಗಗೊಂಡಿದೆ. ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು, ಬಾಂಗ್ಲಾ ವಲಸಿಗರು ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದನ್ನು ಬಹಿರಂಗಪಡಿಸಿದರು.  ನಗರದ ಕೆಲ ಪ್ರದೇಶಗಳಲ್ಲಿ 50 ಸಾವಿರಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು , ಎಲ್ಲ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ತಿಂಗಳಿನಲ್ಲಿ ಮತದಾರರ ಪಟ್ಟಿಗೆ ಹೊಸ ಮತದಾರರನ್ನು ಸೇರ್ಪಡೆ ಮಾಡಲು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದ್ದು ಇದುವರೆಗೂ 9691 ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ. ಇದರಲ್ಲಿ 7,115 ಮಂದಿ ಅರ್ಜಿ ನಮೂನೆ 6 ಹಾಗೂ 2,576 ಮಂದಿ ಅರ್ಜಿ ನಮೂನೆ 7ನ್ನು ಪಡೆದುಕೊಂಡಿದ್ದಾರೆ ಎಂದು ಆಯುಕ್ತರು ವಿವರಿಸಿದರು.

ನಗರದಲ್ಲಿ ಲಿಂಗಾನುಪಾತದ ಪ್ರಕಾರ ಒಂದು ಸಾವಿರ ಪುರುಷರಿಗೆ 930ರಿಂದ 960 ಮಹಿಳೆಯರಿದ್ದಾರೆ. ಆದರೆ ಮತದಾರರ ಪಟ್ಟಿಯಲ್ಲಿ ಮಹಿಳೆಯರ ಅನುಪಾತ ಸಾವಿರಕ್ಕೆ 820ರಷ್ಟು ಇದೆ. ಇದು ಮಹಿಳೆಯರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಬಾರಿ ಮಹಿಳೆಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ವಿಶೇಷ ಆಂದೋಲನದಲ್ಲಿ ಆದ್ಯತೆ ನೀಡಲಾಗುವುದು ಎಂದು ಮಂಜುನಾಥ್ ಪ್ರಸಾದ್ ವಿವರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin