ವೇದಿಕೆ ಮೇಲೆ ಹತ್ತಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿದ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-01

ಮೈಸೂರು, ಜು.15- ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ ವ್ಯಕ್ತಿಯೊಬ್ಬ ವೇದಿಕೆ ಮೇಲೆ ಹತ್ತಿ ಗಲಾಟೆ ಆರಂಭಿಸಿದಾಗ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಡೆದಿದೆ. ನಗರದ ಕಲಾಮಂದಿರದಲ್ಲಿ ಜಾಗತಿಕ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳ ಹಾಗೂ ವಿಶಿಷ್ಟ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಬಂದಾಗ ಯುವಕ ಪರಶುರಾಮ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ.

ಕಳೆದ ಸಾಲಿನಲ್ಲಿ ಆಹಾರ ಮೇಳದಲ್ಲಿ ನಡೆದಿರುವ ಅಕ್ರಮಗಳ ತನಿಖೆ ನಡೆದಿಲ್ಲ. ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಸಿಗುತ್ತಿಲ್ಲ. ನಾನೂ ಹಲವು ಬಾರಿ ಪ್ರಯತ್ನಿಸಿದರೂ ಯಾವುದಕ್ಕೂ ಆಯ್ಕೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ಕಾರ್ಯಕ್ರಮ ನಡೆಯಲು ಅನುವು ಮಾಡಿಕೊಟ್ಟರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin