‘ಶೋಭಾ ಕರಂದ್ಲಾಜೆ ದಲಿತನನ್ನು ಮದುವೆಯಾಗಲಿ’

Parameshwar--01ಬೆಂಗಳೂರು, ಜು.15-ನನಗೂ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಮದುವೆ ಆಗಿದೆ. ಮದುವೆ ಆಗದೆ ಇರುವ ಶೋಭಾ ಕರಂದ್ಲಾಜೆ ಅವರು ಒಬ್ಬ ದಲಿತನನ್ನು ಆಯ್ಕೆ ಮಾಡಿಕೊಂಡು ಮದುವೆಯಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದರು.  ಇತ್ತೀಚೆಗೆ ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಅವರು ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಅವರು ದಲಿತರನ್ನು ಮದುವೆಯಾಗಿದ್ದಾರಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ಈಗಾಗಲೇ ದಿನೇಶ್ ಗುಂಡೂರಾವ್ ಆ ಹೇಳಿಕೆಗೆ ಪ್ರಕ್ರಿಯೆ ನೀಡಿದ್ದಾರೆ.

ಪದೇ ಪದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದರು. ನಮಗೆ ಮದುವೆ ಆಗಿದೆ. ಶೋಭಾ ಕರಂದ್ಲಾಜೆ ಅವರು ಒಬ್ಬ ದಲಿತನನ್ನು ಆಯ್ಕೆ ಮಾಡಿಕೊಂಡು ಮದುವೆಯಾಗಲಿ ಎಂದು ಸಲಹೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin