ಸ್ವಕ್ಷೇತ್ರ ವರುಣಾದಲ್ಲಿ 500 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಸಿಎಂ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-Varuna

ನಂಜನಗೂಡು, ಜು.15- ಗ್ರಾಮೀಣ ಪ್ರದೇಶದವರಿಗೆ ಉತ್ತಮ ಆರೋಗ್ಯ, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 500 ಕೋಟಿಗೂ. ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿನಿಧಿಸುವ ತಮ್ಮ ವರುಣಾ ಕ್ಷೇತ್ರದ ತಗಡೂರು ಜಿಪಂ ವ್ಯಾಪ್ತಿಯಲ್ಲಿರುವ ಕೊಂತಯ್ಯನ ಹುಂಡಿ ಗ್ರಾಮದಲ್ಲಿ 10 ಎಕರೆ ಪ್ರದೇಶದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಸುವ್ಯವಸ್ಥಿತವಾಗಿ ಅಟಲ್ ಬಿಹಾರಿ ವಾಜಪೇಯಿ ಮಾದರಿ ವಸತಿ ಶಾಲೆ ಸಂಕೀರ್ಣ ಉದ್ಘಾಟನೆ ಹಾಗೂ ತಗಡೂರಿನ ಬೊಮ್ಮನಕೆರೆ ಸೇರಿದಂತೆ 24 ಕೆರೆಗಳ ಅಭಿವೃದ್ಧಿ ಮತ್ತು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪೂಜೆ ನೇರವೇರಿಸಿದರು.

ಹೊಸಕೋಟೆ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆ ವತಿಯಿಂದ 2 ಕೋಟಿ 50 ಲಕ್ಷ ವೆಚ್ಚದಲ್ಲಿ 10 ಹಾಸಿಗೆವುಳ್ಳ ಸುಸಜ್ಜಿತವಾದ ಆಸ್ಪತ್ರೆಗೆ ಸಿಎಂ ಗುದ್ದಲಿ ಪೂಜೆ ನೇರವೇರಿಸಿದರು.  ಸುತ್ತೂರು, ತಗಡೂರು ಕೆರೆಗಳ ಅಭಿವೃದ್ಧಿ ಮತ್ತು ನೀರು ತುಂಬಿಸುವ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಸಿಎಂ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದು, 223 ಕೋಟಿ ರೂ. ವೆಚ್ಚದಲ್ಲಿ 24 ಕೆರೆಗಳನ್ನು ಅಭಿವೃದ್ಧಿಪಡಿಸಿ ಕಬಿನಿ ನದಿಯಿಂದ ನೀರನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಿದ್ದು, 18 ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದ್ದು, 59 ಗ್ರಾಮಗಳಿಗೆ ಇದರ ಉಪಯೋಗವಾಗಲಿದೆ ಎಂದರು.

ವರುಣಾ ಕ್ಷೇತ್ರಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಡಾ.ಯತೀಂದ್ರ ಮತ್ತು ಅಧಿಕಾರಿ ರಾಮಯ್ಯ ನೋಡಿಕೊಳ್ಳುವರು. ಏನೇ ಸಮಸ್ಯೆಯಿದ್ದರೂ ಅವರಿಗೆ ತಿಳಿಸುವಂತೆ ಗ್ರಾಮಸ್ಥರಿಗೆ ತಿಳಿಸಿದರು.  ಸಚಿವರಾದ ಹೆಚ್.ಸಿ.ಮಹದೇವಪ್ಪ. ಎಂ.ಬಿ.ಪಾಟೀಲ್, ಸಂಸದ ಆರ್.ಧೃವನಾರಯಣ್, ಶಾಸಕ ಕಳಲೆ ಕೇಶವಮೂರ್ತಿ, ಜಿಪಂ ಸದಸ್ಯ ಸದಾನಂದ, ಹೆಚ್.ಎಸ್.ದಯಾನಂದಮೂರ್ತಿ, ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ, ತಾಪಂ ಉಪಾಧ್ಯಕ್ಷ ಆರ್. ಗೋವಿಂದರಾಜನ್, ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಉಪಾಧ್ಯಕ್ಷ ಗುರುಪಾದಸ್ವಾಮಿ, ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಎಪಿಎಂಸಿ ಸದಸ್ಯ ಹಾಗೂ ಗ್ರಾಪಂ ಅಧ್ಯಕ್ಷ ಆರ್.ಮಹದೇವು, ವರುಣಾ ಕ್ಷೇತ್ರದ ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಹೊಸಕೋಟೆ ಕುಮಾರ್, ಗ್ರಾಪಂ ಅಧ್ಯಕ್ಷ ನಂದೀಶ್ ಕುಮಾರ್, ಉಪಾಧ್ಯಕ್ಷೆ ಇಂದ್ರಾಣಿ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin