ಅಮರನಾಥ ಯಾತ್ರಿಕರ ಮೇಲೆ ದಾಳಿ ಪ್ರಕರಣ : ಸತ್ತವರ ಸಂಖ್ಯೆ 8ಕ್ಕೇರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Amarnath-Yatra--01

ನಗರ, ಜು.16-ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯೆಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಹತ್ಯಾಕಾಂಡದಲ್ಲಿ ಸತ್ತವರ ಸಂಖ್ಯೆ 8ಕ್ಕೇರಿದೆ.
ಲಷ್ಕರ್-ಎ-ತೈಬಾ ಉಗ್ರರ ಗುಂಡೇಟಿನಿಂದ ಗಾಯಗೊಂಡು ಶ್ರೀನಗರ ಸ್ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಲಿತಾ (47) ಎಂಬ ಯಾತ್ರಿಕರು ಮೃತರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜು.10ರಂದು ಮೋಟಾರ್ ಬೈಕ್‍ಗಳಲ್ಲಿ ಬಂದ ಭಯೋತ್ಪಾದಕರು ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಏಳು ಮಂದಿ ಹತರಾಗಿ, 32 ಜನ ಗಾಯಗೊಂಡಿದ್ದರು. ಇಂದು ಮತ್ತೊಬ್ಬ ಯಾತ್ರಿ ಕೊನೆಯುಸಿರೆದಿದ್ದು, ಬಲಿಯಾದವರ ಸಂಖ್ಯೆ 8ಕ್ಕೆ ಏರಿದಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin